ಬೆಂಗಳೂರು : ಗ್ರಾಮೀಣ ವಿದ್ಯಾರ್ಥಿಗಳು ಬೆಂಗಳೂರಿನಂತಹ ಮಹಾನಗರ ಬಿಡಿ, ಜಿಲ್ಲಾ ಕೇಂದ್ರಗಳಲ್ಲೂ ಅಧ್ಯಯನ ಮಾಡುವುದು ಕಷ್ಟವಾಗುತ್ತದೆ. ಅವರಿಗೆ ಸರ್ಕಾರವು ಉಚಿತ ಹಾಸ್ಟೆಲ್ ವ್ಯವಸ್ಥೆ ಮಾಡಲಾಗಿದ್ದು, ಈಗ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗಾಗಿ, ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಹಾಸ್ಟೆಲ್ ಉಚಿತ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಮೂಲಕ ಯಾವುದೇ ವೆಚ್ಚದ ಟೆನ್ಶನ್ ಇಲ್ಲದೆ ನೆಚ್ಚಿನ ಕೋರ್ಸ್ ಮುಗಿಸಬಹುದಾಗಿದೆ.
ಹೌದು, ಸಮಾಜ ಕಲ್ಯಾಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ ಉಚಿತ ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆ ಮೂಲಕ ಹಾಸ್ಟೆಲ್ ಗಳಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯವನ್ನು ಪಡೆಯಬಹುದಾಗಿದೆ.
ಮೆಟ್ರಿಕ್ ನಂತರದ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಂದರೆ, ಪಿಯುಸಿ, ಪದವಿ, ಡಿಪ್ಲೋಮಾ, ಎಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ ಕಲಿಯುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರು. ಜಾತಿ ಮತ್ತು ಆದಾಯ ಪ್ರಮಾಣಪತ್ರ, ಕಾಲೇಜು ಪ್ರವೇಶಾತಿ ಸಂಖ್ಯೆ, ಎಸ್ಎಸ್ ಪಿ ವಿದ್ಯಾರ್ಥಿ ಐಡಿ ಹಾಗೂ ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು https://swdhmis.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಮೆಟ್ರೋದಲ್ಲಿ 37 ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಕೆಗೆ ಕೊನೆ ದಿನ ಯಾವಾಗ ಗೊತ್ತಾ?



















