ಉಡುಪಿ : ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಮೀನು ಸಾಗಿಸುವ ಇನ್ಸುಲೇಟರ್ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಬೈಂದೂರು ತಾಲ್ಲೂಕಿನ ಕೊಲ್ಲೂರು ದಳಿ ಎಂಬಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೇರಳದ ಜ್ಯೋತಿ (35) ಹಾಗೂ ಆರ್ಯ ಅನೂಪ್(28) ಎಂದು ಗುರುತಿಸಲಾಗಿದೆ. ಅಯನ್(5), ಅವನಿ (8), ಅರ್ಜುನ್ (9), ಮಿನಿ(60), ಅಭಿ(36), ಅನೂಪ್(37), ಜ್ಯೋತಿಷ್(43), ಜೀಪು ಚಾಲಕ ದೇವರಾಜ್ ಎಂಬವರು ತೀವ್ರವಾಗಿ ಗಾಯಗೊಂಡು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರು ಕೇರಳ ರಾಜ್ಯದವರು ಎಂದು ತಿಳಿದುಬಂದಿದೆ.
ಕೊಡಚಾದ್ರಿಯಿಂದ ಕೊಲ್ಲೂರಿನತ್ತ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಕೊಲ್ಲೂರು ಕಡೆಯಿಂದ ಶಿವಮೊಗ್ಗ ಕಡೆಯತ್ತ ಸಾಗುತ್ತಿದ್ದ ಮೀನು ಸಾಗಿಸುವ ಇನ್ಸುಲೇಟರ್ ವಾಹನದ ಮಧ್ಯೆ ಈ ಅಪಘಾತ ನಡೆದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕರ್ನಾಟಕ ಯುವ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ : ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿ 15 ಪದಾಧಿಕಾರಿಗಳು ಅಮಾನತು!


















