ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ (UCSL Recruitment 2026) ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 6 ಅಸಿಸ್ಟಂಟ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದಾಗಿದೆ.
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಅಸಿಸ್ಟಂಟ್ ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆಗಳು: 6
ಉದ್ಯೋಗ ಸ್ಥಳ: ಉಡುಪಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 4
4 ಅಸಿಸ್ಟಂಟ್ ಮ್ಯಾನೇಜರ್, 2 ಸ್ಟೋರ್ ಕೀಪರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೋಮಾ, ಬಿ.ಇ, ಬಿ.ಟೆಕ್, ಪದವಿ, ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 61 ಸಾವಿರ ರೂ.ವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಎಲ್ಲ ಅಭ್ಯರ್ಥಿಗಳಿಗೆ 400 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ udupicsl.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!



















