ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಕೌನ್ಸಿಲ್ ಫಾರ್ ಸಿಮೆಂಟ್ ಆ್ಯಂಡ್ ಬಿಲ್ಡಿಂಗ್ ಮಟಿರಿಯಲ್ಸ್ (NCCBM Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 26 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 26 ಮ್ಯಾನೇಜರ್, ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆಯ ಹೆಸರು: ನ್ಯಾಷನಲ್ ಕೌನ್ಸಿಲ್ ಫಾರ್ ಸಿಮೆಂಟ್ ಆ್ಯಂಡ್ ಬಿಲ್ಡಿಂಗ್ ಮಟಿರಿಯಲ್ಸ್ (NCCBM)
ಒಟ್ಟು ಹುದ್ದೆಗಳ ಸಂಖ್ಯೆ: 26
ಉದ್ಯೋಗ ಸ್ಥಳ: ದೇಶಾದ್ಯಂತ
ಹುದ್ದೆ ಹೆಸರು: ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 8
14 ಡೆಪ್ಯೂಟಿ ಮ್ಯಾನೇಜರ್, 8 ಮ್ಯಾನೇಜರ್, 1 ಗ್ರೂಪ್ ಮ್ಯಾನೇಜರ್, 1 ಆಫೀಸ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎ, ಬಿ.ಇ, ಬಿ.ಟೆಕ್, ಎಂ.ಎಸ್ಸಿ, ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 40 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ncbindia.com ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಮಹಾನಿರ್ದೇಶಕರು,
ನ್ಯಾಷನಲ್ ಕೌನ್ಸಿಲ್ ಫಾರ್ ಸಿಮೆಂಟ್ ಆ್ಯಂಡ್ ಬಿಲ್ಡಿಂಗ್ ಮಟಿರಿಯಲ್ಸ್,
34 ಕೆಎಂ ಸ್ಟೋನ್, ದೆಹಲಿ ಮಥುರಾ ರಸ್ತೆ, (ರಾಷ್ಟ್ರೀಯ ಹೆದ್ದಾರಿ-2),
ವಲ್ಲಭಗಢ, ಹರಿಯಾಣ, 121004
ಇದನ್ನೂ ಓದಿ : ಹೂಡಿಕೆದಾರರಿಗೆ ಸಿಹಿ ಸುದ್ದಿ : ನಿಶ್ಚಿತ ಠೇವಣಿ ಮೇಲಿನ ಬಡ್ಡಿ ಏರಿಕೆ ಮಾಡಿದೆ ಈ ಸರ್ಕಾರಿ ಬ್ಯಾಂಕ್!



















