ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಸಂಸ್ಥೆಯಲ್ಲಿ ಖಾಲಿ ಇರುವ (CDAC Recruitment 2026) 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 7 ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆಯ ಹೆಸರು : ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC)
ಒಟ್ಟು ಹುದ್ದೆಗಳ ಸಂಖ್ಯೆ: 7
ಉದ್ಯೋಗ ಸ್ಥಳ: ಕರ್ನಾಟಕ ಹಾಗೂ ನವದೆಹಲಿ
ಹುದ್ದೆ ಹೆಸರು: ಕನ್ಸಲ್ಟಂಟ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 30
ಕರ್ನಾಟಕದ ಬೆಂಗಳೂರು ಹಾಗೂ ನವದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ, ಬಿ.ಟೆಕ್, ಮಾಸ್ಟರ್ ಡಿಗ್ರಿ, ಎಂ.ಇ, ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಗರಿಷ್ಠ 64 ವರ್ಷಗಳ ವಯೋಮಿತಿ ನಿಗಿದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cdac.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಬೆರಳಿಗೆ ಗಾಯ, ಕನ್ಕಶನ್ ಗೊಂದಲ : ಮುಂಬೈ ವಿರುದ್ಧದ ಪಂದ್ಯದಲ್ಲಿ KKR ಬದಲಿ ಆಟಗಾರನ ತೀವ್ರ ಚರ್ಚೆ!



















