ಬೆಂಗಳೂರು : ದೇಶದ ಸಾರ್ವಜನಿಕ ವಲಯದ ಬೃಹತ್ ಬ್ಯಾಂಕ್ ಆಗಿರುವ, ಜನರ ವಿಶ್ವಾಸ ಗಳಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಭರ್ಜಿರಿ ನೇಮಕಾತಿ ನಡೆಯುತ್ತಿದೆ. ಎಸ್ ಬಿಐನಲ್ಲಿ ಖಾಲಿ ಇರುವ 7,150 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗ್ರ್ಯಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆಯ ಹೆಸರು: ಭಾರತೀಯ ಸ್ಟೇಟ್ ಬ್ಯಾಂಕ್
ಒಟ್ಟು ಹುದ್ದೆಗಳ ಸಂಖ್ಯೆ: 7,150
ಉದ್ಯೋಗ ಸ್ಥಳ: ದೇಶಾದ್ಯಂತ
ಹುದ್ದೆ ಹೆಸರು: ಗ್ರ್ಯಾಜುಯೇಟ್ ಅಪ್ರೆಂಟಿಸ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 8
ದೇಶಾದ್ಯಂತ ನೇಮಕಾತಿ ನಡೆಯುತ್ತಿದ್ದು, ಕರ್ನಾಟಕದಲ್ಲಿ ಕೂಡ 276 ಹುದ್ದೆಗಳು ಖಾಲಿ ಇವೆ. ಕರ್ನಾಟಕದಲ್ಲಿರುವ ಬ್ರ್ಯಾಂಚ್ ಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಈಗಷ್ಟೇ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ www.sbi.co.in ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು. ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಆನ್ ಲೈನ್ ಪರೀಕ್ಷೆ ಹಾಗೂ ಸ್ಥಳೀಯ ಭಾಷಾ ಪ್ರಾವೀಣ್ಯತೆಯನ್ನು ಪರಿಶೀಲನೆ ಮಾಡಿದ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆಯನ್ನು ರಕ್ಷಿಸಿದ ಪೊಲೀಸರು.. ವಿಡಿಯೋ ವೈರಲ್!



















