ಬೆಂಗಳೂರು : ನೀವು ಬಾಗಲಕೋಟೆ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಬಾಗಲಕೋಟೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (WCD Bagalkot Recruitment 2026) ಖಾಲಿ ಇರುವ 98 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಾಗಲಕೋಟೆ
ಒಟ್ಟು ಹುದ್ದೆಗಳು: 98
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು
ಉದ್ಯೋಗ ಸ್ಥಳ: ಬಾಗಲಕೋಟೆ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 12
ಬಾಗಲಕೋಟೆ ಜಿಲ್ಲೆಯ 6 ಶಿಶು ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ಒಟ್ಟು 6 ಅಂಗನವಾಡಿ ಅಥವಾ ಕ್ರಶ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಇವುಗಳಿಗೆ ಈಗ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬಾಗಲಕೋಟೆ, ಬೀಳಗಿ, ಹುನಗುಂದ, ಬಾದಾಮಿ, ಜಮಖಂಡಿ, ಮುಧೋಳದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಉತ್ತೀರ್ಣರಾಗಿರಬೇಕು. 21 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಜಿಲ್ಲೆ ಹಲವು ತಾಲೂಕುಗಳಲ್ಲಿ ಹುದ್ದೆಗಳು ಖಾಲಿ ಇವೆ. ಬಾಗಲಕೋಟೆ ತಾಲೂಕಿನಲ್ಲಿ ಎಂಟು ಅಂಗನವಾಡಿ ಕಾರ್ಯಕರ್ತೆಯರು, ಎಂಟು ಸಹಾಯಕಿಯರು, ಬೀಳಗಿಯಲ್ಲಿ ನಾಲ್ವರು ಕಾರ್ಯಕರ್ತೆಯರು, ನಾಲ್ವರು ಸಹಾಯಕಿಯರು, ಹುನಗುಂದ ತಾಲೂಕಿನಲ್ಲಿ ಒಂಬತ್ತು ಕಾರ್ಯಕರ್ತೆಯರು, ಒಂಬತ್ತು ಸಹಾಯಕಿಯರು, ಬಾದಾಮಿ ತಾಲೂಕಿನಲ್ಲಿ ಒಂಬತ್ತು ಕಾರ್ಯಕರ್ತೆಯರು, ಒಂಬತ್ತು ಸಹಾಯಕಿಯರು, ಜಮಖಂಡಿಯಲ್ಲಿ ಹತ್ತು ಕಾರ್ಯಕರ್ತೆಯರು, ಹತ್ತು ಸಹಾಯಕಿಯರು ಹಾಗೂ ಮುಧೋಳ ತಾಲೂಕಿನಲ್ಲಿ ಒಂಬತ್ತು ಕಾರ್ಯಕರ್ತೆಯರು, ಒಂಬತ್ತು ಸಹಾಯಕಿಯರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ : ಎಂಡಿ, ಸ್ನಾತಕೋತ್ತರ ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ESICಯಲ್ಲಿ 118 ಹುದ್ದೆಗಳ ನೇಮಕಾತಿ



















