ಬೆಂಗಳೂರು: ನೀವೇನಾದರೂ ಐಟಿಐ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿ, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 21 ಪ್ರಾಜೆಕ್ಟ್ ಅಸೋಸಿಯೇಟ್ ಸೇರಿ ಹಲವು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL)
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್
ಒಟ್ಟು ಹುದ್ದೆಗಳು: 21
ಸಂದರ್ಶನದ ದಿನಾಂಕ: ಮೇ 29
ಉದ್ಯೋಗ ಸ್ಥಳ: ಬೆಂಗಳೂರು
ಪ್ರಾಜೆಕ್ಟ್ ಅಸೋಸಿಯೇಟ್ ಹಾಗೂ ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ, ಬಿ.ಇ. ಬಿ.ಟೆಕ್, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 28 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nal.res.in ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ CSIR-NAL (RAB Meeting Complex, National Aerospace Laboratories), Adjacent to SBI, NAL Branch, Kodihalli, Bengaluru ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.



















