ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರಿಗೆ ಜಾಹೀರಾತು ಲಿಂಕ್ ಮೂಲಕ ಸೈಬರ್ ವಂಚನೆ ನಡೆದ ಘಟನೆ ಬೆಳಕಿಗೆ ಬಂದಿದೆ. ವಿಜಯಲಕ್ಷ್ಮೀ ಗಟ್ಟೂರ ಎಂಬ ಮಹಿಳೆ ವಂಚನೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಅಪರಿಚಿತರು “ಸಾನಿಯಾ ಕುರತಿ ಕಲೆಕ್ಷನ್” ಹಾಗೂ “ರಾಧಿಕಾ ಪ್ಯಾಷನ್ ಟೇರ್ಸ್” ಹೆಸರಿನ ಜಾಹೀರಾತು ಲಿಂಕ್ ಕಳುಹಿಸಿದ್ದರು.
ಲಿಂಕ್ ತೆರೆಯುತ್ತಿದ್ದಂತೆ ವಿವಿಧ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿ, ಒಟ್ಟು ₹2.7 ಲಕ್ಷ ರೂಪಾಯಿ ವಂಚನೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪರಿಚಿತ ಲಿಂಕ್‌ಗಳನ್ನು ತೆರೆಯಬಾರದೆಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.


















