ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತೀಯ ಯುವಕರನ್ನು ಪಾಕಿಸ್ತಾನಿಗಳೆಂದು ಏಕೆ ಕರೆಯುತ್ತೀರಿ? : ಕೇಂದ್ರ ಸಚಿವ ರಿಜಿಜುಗೆ ‘ಕಾಕ್ರೋಚ್ ಜನತಾ ಪಾರ್ಟಿ’ ತಿರುಗೇಟು!

May 24, 2026
Share on WhatsappShare on FacebookShare on Twitter

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ‘ಕಾಕ್ರೋಚ್ ಜನತಾ ಪಾರ್ಟಿ‘ (ಸಿಜೆಪಿ) ಡಿಜಿಟಲ್ ಚಳವಳಿಯ ಬೆಂಬಲಿಗರನ್ನು ಪಾಕಿಸ್ತಾನ ಮತ್ತು ಜಾರ್ಜ್ ಸೊರೊಸ್ ಜಾಲಕ್ಕೆ ನಂಟು ಕಲ್ಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಹೇಳಿಕೆಗೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪೇಜ್‌ನ ಫಾಲೋವರ್ಸ್‌ಗಳಲ್ಲಿ ಶೇ.94ರಷ್ಟು ಮಂದಿ ಭಾರತೀಯರೇ ಆಗಿದ್ದಾರೆ ಎಂದು ಸಾಬೀತುಪಡಿಸುವ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಅವರು, “ಕೇಂದ್ರ ಸಚಿವರು ಭಾರತೀಯ ಯುವಕರಿಗೆ ಪಾಕಿಸ್ತಾನಿಗಳು ಎಂದು ಏಕೆ ಹಣೆಪಟ್ಟಿ ಕಟ್ಟುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಜಾಲತಾಣದಲ್ಲಿ ಸಚಿವರ ನೇರ ವಾಗ್ದಾಳಿ

ಕೇಂದ್ರ ಸಚಿವ ಕಿರಣ್ ರಿಜಿಜು ಅವರು ‘X’ (ಟ್ವಿಟರ್) ಖಾತೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಹೆಸರನ್ನು ನೇರವಾಗಿ ಉಲ್ಲೇಖಿಸದೆ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದರು. “ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ಮತ್ತು ಜಾರ್ಜ್ ಸೊರೊಸ್ ಗ್ಯಾಂಗ್‌ನಿಂದ ಫಾಲೋವರ್ಸ್‌ಗಳನ್ನು ಹುಡುಕುವವರನ್ನು ಕಂಡರೆ ನನಗೆ ಮರುಕವಾಗುತ್ತದೆ. ಭಾರತದಲ್ಲೇ ಸಾಕಷ್ಟು ಜನಸಂಖ್ಯೆ ಮತ್ತು ಅತ್ಯಂತ ಶಕ್ತಿಶಾಲಿ ಯುವ ಸಮೂಹವಿದೆ, ಅವರೇ ನಿಜವಾದ ಮತ್ತು ಮೌಲ್ಯಯುತ ಫಾಲೋವರ್ಸ್ ಆಗಬಲ್ಲರು. ಭಾರತ ವಿರೋಧಿ ಗ್ಯಾಂಗ್‌ನಿಂದ ನಾವು ಮಾನ್ಯತೆ ಪಡೆಯುವ ಅಗತ್ಯವಿಲ್ಲ” ಎಂದು ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ದೀಪ್ಕೆ ಅವರು ತಮ್ಮ ಖಾತೆ ಹ್ಯಾಕ್ ಆಗುವ ಮುನ್ನ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದ ಪ್ರೇಕ್ಷಕರು ಹಾಗೂ ಫಾಲೋವರ್‌ಗಳ ಸಂಖ್ಯೆಯ ವಿವರಗಳ (Audience Demographics) ಸಾಕ್ಷ್ಯವನ್ನು ಬಿಡುಗಡೆ ಮಾಡಿದ್ದಾರೆ. ಜೊತೆಗೆ, ಭಾರತೀಯ ಯುವಜನತೆಯನ್ನು ನೀವೇಕೆ ಪಾಕಿಸ್ತಾನೀಯರೆಂದು ಕರೆಯುತ್ತೀರಿ ಎಂದು ರಿಜಿಜುಗೆ ಪ್ರಶ್ನೆ ಮಾಡಿದ್ದಾರೆ.

ಏನಿದು ಕಾಕ್ರೋಚ್ ಜನತಾ ಪಾರ್ಟಿ?

ಕಳೆದ ಒಂದು ವಾರದಿಂದ ಇಂಟರ್ನೆಟ್‌ನಲ್ಲಿ ದೊಡ್ಡ ಮಟ್ಟದ ಟ್ರೆಂಡ್ ಸೃಷ್ಟಿಸಿರುವ ‘ಕಾಕ್ರೋಚ್ ಜನತಾ ಪಾರ್ಟಿ’ ಒಂದು ವ್ಯಂಗ್ಯಭರಿತ ಹಾಗೂ ವಿಡಂಬನಾತ್ಮಕ ಡಿಜಿಟಲ್ ಚಳವಳಿಯಾಗಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯೊಂದರ ವೇಳೆ ವಕೀಲರೊಬ್ಬರ ಅರ್ಹತೆಯ ಕುರಿತು ಮಾತನಾಡುತ್ತಾ, ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರು ಆಡಿದ್ದಾರೆನ್ನಲಾದ ‘ಕಾಕ್ರೋಚ್’ ಮತ್ತು ‘ಪರಾವಲಂಬಿ’ ಎಂಬ ಪದಗಳನ್ನೇ ಬಳಸಿಕೊಂಡು ಈ ವೇದಿಕೆಯನ್ನು ಆರಂಭಿಸಲಾಗಿದೆ. ಆದಾಗ್ಯೂ, ನಕಲಿ ಪದವಿಗಳ ಮೂಲಕ ವಕೀಲ ವೃತ್ತಿಗೆ ಬರುವವರನ್ನು ಉಲ್ಲೇಖಿಸಿ ತಾವು ಆ ಮಾತು ಹೇಳಿದ್ದಾಗಿ ಸಿಜೆಐ ನಂತರ ಸ್ಪಷ್ಟಪಡಿಸಿದ್ದರೂ, ಇದನ್ನೇ ಬಂಡವಾಳವಾಗಿಸಿಕೊಂಡ ದೀಪ್ಕೆ, ಯುವಕರ ಉದ್ಯೋಗ ಸಮಸ್ಯೆ, ಪರೀಕ್ಷೆಯ ಒತ್ತಡ ಹಾಗೂ ನೇಮಕಾತಿ ಅಕ್ರಮಗಳ ವಿರುದ್ಧ ಧ್ವನಿ ಎತ್ತುವ ಯುವ ಚಳವಳಿಯಾಗಿ ಇದನ್ನು ರೂಪಿಸಿದ್ದಾರೆ. ಇದಕ್ಕೆ ದೇಶದ ಜೆನ್ ಝೀಗಳಿಂದ(ಯುವ ಜನಾಂಗ) ಭಾರೀ ಪ್ರಮಾಣದ ಬೆಂಬಲವೂ ವ್ಯಕ್ತವಾಗುತ್ತಿದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ ಬೆಳವಣಿಗೆ

ಪ್ರಸ್ತುತ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ‘ನೀಟ್-ಯುಜಿ 2026’ (NEET-UG 2026) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಸಮಯದಲ್ಲೇ ಈ ವೇದಿಕೆ ಅತ್ಯಂತ ಜನಪ್ರಿಯವಾಗಿದೆ. ಪರೀಕ್ಷಾ ಪದ್ಧತಿಯಿಂದ ಬೇಸತ್ತಿದ್ದ ಲಕ್ಷಾಂತರ ವೈದ್ಯಕೀಯ ವಿದ್ಯಾರ್ಥಿಗಳ ಧ್ವನಿಯಾಗಿ ಇದು ಬಿಂಬಿತವಾಗಿದೆ. ಪರಿಣಾಮವಾಗಿ, ಲಾಂಚ್ ಆದ ಕೆಲವೇ ದಿನಗಳಲ್ಲಿ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆಯಲ್ಲಿ ಈ ಪೇಜ್ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಅಧಿಕೃತ ಪೇಜ್‌ಗಳನ್ನೇ ಹಿಂದಿಕ್ಕಿ ಮುನ್ನಡೆ ಸಾಧಿಸಿದೆ. ಈ ವೇದಿಕೆಯ ಮೂಲಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಸಿದ ಆನ್‌ಲೈನ್ ಅಭಿಯಾನಕ್ಕೆ ಸುಮಾರು 6 ಲಕ್ಷಕ್ಕೂ ಹೆಚ್ಚು ಜನರು ಸಹಿ ಹಾಕಿದ್ದರು ಮತ್ತು 10 ಲಕ್ಷಕ್ಕೂ ಹೆಚ್ಚು ಬಳಕೆದಾರರು ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಂಡಿದ್ದರು ಎಂದು ದೀಪ್ಕೆ ಹೇಳಿದ್ದಾರೆ.


ಹ್ಯಾಕಿಂಗ್, ನಿಷೇಧದ ಆರೋಪ


ತಮ್ಮ ಚಳವಳಿ ತೀವ್ರಗೊಳ್ಳುತ್ತಿದ್ದಂತೆ ಸರ್ಕಾರದ ವ್ಯವಸ್ಥಿತ ಹತ್ತಿಕ್ಕುವಿಕೆ ಆರಂಭವಾಗಿದೆ ಎಂದು ಅಭಿಜೀತ್ ದೀಪ್ಕೆ ಆರೋಪಿಸಿದ್ದಾರೆ. ಸಂಸ್ಥೆಯ ಇನ್‌ಸ್ಟಾಗ್ರಾಮ್ ಪೇಜ್, ತಮ್ಮ ವೈಯಕ್ತಿಕ ಖಾತೆ ಹಾಗೂ ಅಧಿಕೃತ ‘X’ ಹ್ಯಾಂಡಲ್‌ಗಳನ್ನು ಹ್ಯಾಕ್ ಮಾಡಲಾಗಿದೆ ಅಥವಾ ತಡೆಹಿಡಿಯಲಾಗಿದೆ ಎಂದು ಅವರು ದೂರಿದ್ದಾರೆ. ಅಲ್ಲದೆ ವೆಬ್‌ಸೈಟ್ ಅನ್ನು ಸಹ ಸ್ಥಗಿತಗೊಳಿಸಲಾಗಿದ್ದು, ತಮಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ದೀಪ್ಕೆ ತಿಳಿಸಿದ್ದಾರೆ. “ಪೇಪರ್ ಲೀಕ್ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಶಿಕ್ಷಣ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಹೊಸ ಭಾರತದಲ್ಲಿ ಹೊಣೆಗಾರಿಕೆಯನ್ನು ಪ್ರಶ್ನಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಈ ವೇದಿಕೆಯನ್ನು ಸ್ಥಾಪಿಸಿರುವ ಅಭಿಜೀತ್ ದೀಪ್ಕೆ ಅವರು ಪುಣೆ ಮೂಲದವರಾಗಿದ್ದು, ಸದ್ಯ ಬೋಸ್ಟನ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಹಿಂದೆ 2020ರ ದೆಹಲಿ ವಿಧಾನಸಭಾ ಚುನಾವಣೆಯ ವೇಳೆ ಆಮ್ ಆದ್ಮಿ ಪಾರ್ಟಿ (AAP) ಪರ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡಿದ್ದರು ಎಂದು ತಿಳಿದುಬಂದಿದೆ.

Tags: 'Cockroach Janata Party' hits back at Union Minister Rijiju!Karnataka News beatWhy do you call Indian youth Pakistanis?:
SendShareTweet
Previous Post

ಶ್ವೇತಭವನದ ಬಳಿ ದುಷ್ಕರ್ಮಿಯಿಂದ ಗುಂಡಿನ ದಾಳಿ : ತಾನು ‘ಜೀಸಸ್ ಕ್ರೈಸ್ಟ್’ ಎಂದು ನಂಬಿದ್ದ ಶೂಟರ್!

Next Post

ಪೌರ ಕಾರ್ಮಿಕರಿಗೆ ಚಹಾ, ಬಿಸ್ಕೆಟ್ ಕೊಟ್ಟು ಎಲ್ಲರ ಹೃದಯ ಗೆದ್ದ ಮಹಿಳೆ

Related Posts

ಉತ್ತರ ಪ್ರದೇಶದಲ್ಲಿ ದಾಖಲೆಗಳ ಲೋಪದ ಕಾರಣ ಹೇಳಿ 31,000ಕ್ಕೂ ಹೆಚ್ಚು ವಕ್ಫ್ ಆಸ್ತಿಗಳ ನೋಂದಣಿ ರದ್ದು!
ದೇಶ

ಉತ್ತರ ಪ್ರದೇಶದಲ್ಲಿ ದಾಖಲೆಗಳ ಲೋಪದ ಕಾರಣ ಹೇಳಿ 31,000ಕ್ಕೂ ಹೆಚ್ಚು ವಕ್ಫ್ ಆಸ್ತಿಗಳ ನೋಂದಣಿ ರದ್ದು!

ಅವರನ್ನು ನಮ್ಮ ಹತ್ತಿರಕ್ಕೂ ಬರಲು ಬಿಡುವುದಿಲ್ಲ : ಟಿವಿಕೆ ಪರ ನಿಂತ ಕಾಂಗ್ರೆಸ್‌ ವಿರುದ್ಧ ಡಿಎಂಕೆ ಕೆಂಡಾಮಂಡಲ
ದೇಶ

ಅವರನ್ನು ನಮ್ಮ ಹತ್ತಿರಕ್ಕೂ ಬರಲು ಬಿಡುವುದಿಲ್ಲ : ಟಿವಿಕೆ ಪರ ನಿಂತ ಕಾಂಗ್ರೆಸ್‌ ವಿರುದ್ಧ ಡಿಎಂಕೆ ಕೆಂಡಾಮಂಡಲ

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!
ದೇಶ

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ JEE, NEET ಪರೀಕ್ಷೆಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ!
ದೇಶ

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ JEE, NEET ಪರೀಕ್ಷೆಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ!

ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!
ದೇಶ

ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!
ದೇಶ

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

Next Post
ಪೌರ ಕಾರ್ಮಿಕರಿಗೆ ಚಹಾ, ಬಿಸ್ಕೆಟ್ ಕೊಟ್ಟು ಎಲ್ಲರ ಹೃದಯ ಗೆದ್ದ ಮಹಿಳೆ

ಪೌರ ಕಾರ್ಮಿಕರಿಗೆ ಚಹಾ, ಬಿಸ್ಕೆಟ್ ಕೊಟ್ಟು ಎಲ್ಲರ ಹೃದಯ ಗೆದ್ದ ಮಹಿಳೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

Recent News

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat