ದಾವಣಗೆರೆ : ದಾವಣಗೆರೆಯ ಕುಂದುವಾಡ ಕೆರೆ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಅಡಗಿ ಕುಳಿತಿದ್ದ ನಾಗರಹಾವನ್ನು ಸ್ನೇಕ್ ಬಸವರಾಜ್ ಯಶಸ್ವಿಯಾಗಿ ಹಿಡಿದಿದ್ದಾರೆ.
ಹಿತೇಶ್ ಪಾಟೀಲ್ ಅವರಿಗೆ ಸೇರಿದ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 5 ಅಡಿ ಉದ್ದದ ನಾಗರಹಾವು ಕಾಣಿಸಿಕೊಂಡಿದ್ದು, ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ನೇಕ್ ಬಸವರಾಜ್ ಹಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಬಳಿಕ ಆನಗೋಡು ಕುರುಚಲು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಹಾವು ಸೆರೆ ಸಿಕ್ಕ ಬಳಿಕ ಅಪಾರ್ಟ್‌ಮೆಂಟ್ ನಿವಾಸಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.


















