ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲಾಗಿದ್ದಾರೆ.
ಭಟ್ಕಳದ ಶಿರಾಲಿ ಮೂಲದ ಒಂದೇ ಕುಟುಂಬದ 11 ಜನರು ಸೇರಿ ನದಿಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ 9 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭಟ್ಕಳ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.



















