ಬೆಂಗಳೂರು : ನೀವು ಈಗಷ್ಟೇ ಬಿ.ಇ, ಬಿ.ಟೆಕ್, ಐಟಿ ಮುಗಿಸಿದ್ದೀರಾ? ಸರ್ಕಾರದ ಸಂಸ್ಥೆಯಲ್ಲಿ ವೃತ್ತಿ ತರಬೇತಿ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶವಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ (UCSL Recruitment 2026) ಖಾಲಿ ಇರುವ 20 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 20 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 20
ಉದ್ಯೋಗ ಸ್ಥಳ: ಉಡುಪಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 17
13 ಐಟಿಐ ಟ್ರೇಡ್ ಅಪ್ರೆಂಟಿಸ್, 4 ಗ್ರಾಜ್ಯುಯೇಟ್ ಅಪ್ರೆಂಟಿಸ್ ಹಾಗೂ 3 ಡಿಪ್ಲೋಮಾ ಅಂಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ, ಬಿ.ಇ, ಬಿ.ಟೆಕ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 15 ಸಾವಿರ ರೂ.ವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ udupicsl.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಮೆರಿಟ್ ಲಿಸ್ಟ್, ವೈದ್ಯಕೀಯ ತಪಾಸಣೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್ ದಾಖಲು!



















