ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಸರ್ಕಾರಿ ಸ್ವಾಮ್ಯದ ಜಮ್ಮು-ಕಾಶ್ಮೀರ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ (J&K Bank Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕದ ಬೆಂಗಳೂರಿನಲ್ಲೂ ನೇಮಕಾತಿ ನಡೆಯುತ್ತಿರುವ ಕಾರಣ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ನೇಮಕಾತಿ ಸಂಸ್ಥೆ: ಜಮ್ಮು-ಕಾಶ್ಮೀರ ಬ್ಯಾಂಕ್ ಲಿಮಿಟೆಡ್
ಹುದ್ದೆಗಳ ಹೆಸರು: ಜೋನಲ್ ಸೆಕ್ಯುರಿಟಿ ಆಫೀಸರ್
ಒಟ್ಟು ಹುದ್ದೆಗಳು: 7
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 4
ಕರ್ನಾಟಕದ ಬೆಂಗಳೂರು, ಜಮ್ಮು, ಜಮ್ಮು-ಕಾಶ್ಮೀರ, ಮಹಾರಾಷ್ಟ್ರದ ಮುಂಬೈ, ನವದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 15 ಸಾವಿರ ರೂ.ವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 62 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಶಾರ್ಟ್ ಲಿಸ್ಟಿಂಗ್, ಸ್ಕ್ರೀನಿಂಗ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 500 ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ jkbank.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ : ರಿಯಲ್‌ಮಿ ಬಡ್ಸ್ ಏರ್ 8 ಪ್ರೊ ಭಾರತದಲ್ಲಿ ಬಿಡುಗಡೆ – ಅತ್ಯಾಕರ್ಷಕ ವೈಶಿಷ್ಟ್ಯಗಳ ವಿವರ ಇಲ್ಲಿದೆ.



















