ಬೆಂಗಳೂರು : ನಗರದ ವೈಟ್‌ಫೀಲ್ಡ್‌ನಲ್ಲಿ ಮನೆ ಹಾಗೂ ಜ್ಯುವೆಲ್ಲರಿ ಶಾಪ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ವೈಟ್‌ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳ ಅಂತರದಲ್ಲಿ ಯೋಜಿತವಾಗಿ ಬಂದು ಕಳ್ಳತನ ಮಾಡುತ್ತಿದ್ದ ಆರೋಪಿಗಳು ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸುನಿಲ್ ಕುಮಾರ್, ಸತ್ತಿಬಾಬು @ ಸ್ಪೈಡರ್ ಸತೀಶ್ ಹಾಗೂ ನರೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. ಈ ಗ್ಯಾಂಗ್ ಮಾರ್ಚ್ ಮತ್ತು ಮೇ ತಿಂಗಳಲ್ಲಿ ಕಾರ್‌ನಲ್ಲಿ ಬಂದು ಮನೆ ಹಾಗೂ ಜ್ಯುವೆಲ್ಲರಿ ಶಾಪ್‌ಗಳನ್ನು ಟಾರ್ಗೆಟ್ ಮಾಡಿಕೊಂಡು ರಾತ್ರಿ ವೇಳೆ ಕಳ್ಳತನ ನಡೆಸಿ ಪರಾರಿಯಾಗಿದ್ದರು.
ಕಳ್ಳತನದ ಬಳಿಕ ಕಾರ್‌ನಲ್ಲಿ ಎಸ್ಕೇಪ್ ಆಗುತ್ತಿದ್ದ ಗ್ಯಾಂಗ್ ಬಗ್ಗೆ ಮಾಹಿತಿ ಕಲೆಹಾಕಿದ ವೈಟ್‌ಫೀಲ್ಡ್ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ 584 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಆಭರಣಗಳಲ್ಲಿ ವಿವಿಧ ಮಾದರಿಯ ಚಿನ್ನದ ಆಭರಣಗಳು ಸೇರಿವೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ವೈಟ್‌ಫೀಲ್ಡ್ ಪೊಲೀಸರು ತನಿಖೆ ಮುಂದುವರೆಸಿದ್ದು, ಇನ್ನಷ್ಟು ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳ ಸಂಪರ್ಕ ಇರುವ ಸಾಧ್ಯತೆಯನ್ನೂ ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ : ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್!


















