ಬೆಂಗಳೂರು : ನೀವೇನಾದರೂ ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ರಾಜೀವ್ ಗಾಂಧಿ ಇನ್ ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ಟೆಕ್ನಾಲಜಿ ಸಂಸ್ಥೆಯಲ್ಲಿ (RGIPT Recruitment 2026) ಖಾಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಜೀವ್ ಗಾಂಧಿ ಇನ್ ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ಟೆಕ್ನಾಲಜಿ
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಇ-ಮೇಲ್
ಹುದ್ದೆಗಳ ಹೆಸರು: ಪರ್ಚೇಸಿಂಗ್ ಆ್ಯಂಡ್ ಪ್ರೊಕ್ಯೂರ್ ಮೆಂಟ್ ಎಕ್ಸಿಕ್ಯೂಟಿವ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 7
ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಗಳಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಮೆರಿಟ್ ಲಿಸ್ಟ್ ಪ್ರಕಟಿಸಿ, ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ rgipt.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು incharge-bengalurucampus@rgipt.ac.in ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ : ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ



















