ಬೆಂಗಳೂರು : ನೀವು ಚಿಕ್ಕಬಳ್ಳಾಪುರ ಜಿಲ್ಲೆಯವರಾಗಿದ್ದು, ನಿಮ್ಮದೇ ಜಿಲ್ಲೆ ಅಥವಾ ತಾಲೂಕಿನಲ್ಲಿ ಕಾರ್ಯನಿರ್ವಹಿಸಲು ಒಳ್ಳೆಯ ಅವಕಾಶ ದೊರೆತಿದೆ. ಹೌದು, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ 169 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿಗಾಗಿ (DC Office Chikkaballapur Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ
ಒಟ್ಟು ಹುದ್ದೆಗಳು: 169
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 30
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರದಲ್ಲಿ 28, ಚಿಂತಾಮಣಿಯಲ್ಲಿ 59, ಶಿಡ್ಲಘಟ್ಟದಲ್ಲಿ 36 ಹಾಗೂ ಗೌರಿಬಿದನೂರಿನಲ್ಲಿ 46 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಪೌರ ಕಾರ್ಮಿಕರಾಗಿ ದುಡಿಯುತ್ತಿರುವವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸುವವರು ಮೊದಲಿಗೆ chikkaballapurcity.mrc.gov.in ವೆಬ್ ಸೈಟ್ ಗೆ ಭೇಟಿ ನೀಡಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Chikkaballapur Municipal Council, Chintamani Municipal Council, Shidlaghatta Municipal Council, Gauribidanur Municipal Council
ಇದನ್ನೂ ಓದಿ : ಕೇಂದ್ರ ಸರ್ಕಾರದ RGIPT ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸ್ಯಾಲರಿ


















