ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಳೆದೆರಡು ದಿನಗಳಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬಿರುಸಿನ ವಿದ್ಯಮಾನಗಳು ನಿರ್ಣಾಯಕ ಘಟ್ಟಕ್ಕೆ ಬಂದು ನಿಂತಿದ್ದು, ಮೊದಲೇ ನಿರ್ಣಯಿಸಿದಂತೆ ಇಂದು ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿಸುವ ಸಾಧ್ಯತೆಯಿದೆ. ಈ ಹಿನ್ನೆಲೆ ರಾಜ್ಯಪಾಲರ ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ.
ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಕರೆದಿದ್ದಾರೆ. ಈ ಸಭೆಗೆ ಎಲ್ಲ ಸಚಿವರು ಶಾಅಕರಿಗೆ ಆಹ್ವಾನಿಸಲಾಗಿದೆ. ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಸಭೆಯಲ್ಲಿ ಭಾಗಿಯಾಗ್ತಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ತಮ್ಮ ವಿದಾಯ ಭಾಷಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ತಮ್ಮ ರಾಜೀನಾಮೆ ಬಗ್ಗೆಯೂ ಸಿಎಂ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಬ್ರೇಕ್‌ಫಾಸ್ಟ್ ಸಭೆ ಬಳಿಕ ಅಥವಾ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆ ಅಗತ್ಯದ ಬಗ್ಗೆ ರಾಜ್ಯದ ಜನತೆಗೆ ವಿವರಣೆ ಕೊಡುವ ಸಾಧ್ಯತೆ ಇದೆ. ಎರಡು ದಿನಗಳ ಕ್ಷಿಪ್ರ ರಾಜಕೀಯ ಬೆಳವಣಿಗೆ ಬಳಿಕ ಮೊದಲ ಬಾರಿಗೆ ಸಿಎಂ ಮಾಧ್ಯಮಗಳನ್ನು ಈ ಸುದ್ದಿಗೋಷ್ಠಿ ಮೂಲಕ ಎದುರಿಸಲಿದ್ದಾರೆ.
ಇತ್ತ ಆಪ್ತ ಸಚಿವರು ಸಿದ್ದರಾಮಯ್ಯರನ್ನು ನಾನಾ ರೀತಿಯಲ್ಲಿ ನಿರ್ಧಾರ ಬದಲಿಸುವಂತೆ ಒತ್ತಡ ಹೇರುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ಮಾತ್ರ ಯಾವುದೇ ಆಪ್ತರ ಒತ್ತಡಕ್ಕೆ ಮಣಿಯುತ್ತಿಲ್ಲ, ಹೈಕಮಾಂಡ್‌ಗೆ ಕೊಟ್ಟ ಮಾತಿಗೆ ಬದ್ಧನಾಗಿರುತ್ತೇನೆ. ರಾಜ್ಯಪಾಲರನ್ನು ಭೇಟಿ ಮಾಡಿ, ರಾಜೀನಾಮೆ ನೀಡುತ್ತೆನೆಂದು ಆಪ್ತರಿಗೆ ಖಡಕ್ಕಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ವಾ? ರಾತ್ರೋರಾತ್ರಿ ಮುಂಬೈಗೆ ತೆರಳಿದ್ದೇಕೆ ರಾಜ್ಯಪಾಲ ಗೆಹ್ಲೋಟ್?



















