ಬೆಂಗಳೂರು : ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು, ತಮ್ಮ ಆಪ್ತ ಕಾರ್ಯದರ್ಶಿ ಮತ್ತು ವಿಶೇಷಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಹೌದು.. ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಮತ್ತು ವಿಶೇಷ ಕರ್ತವ್ಯ ಅಧಿಕಾರಿ ರಮೇಶ್ ಪಿ ಕೋನಾರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮೂಲಗಳ ಪ್ರಕಾರ ಡಾ.ವೆಂಕಟೇಶಯ್ಯ ಅವರನ್ನು ಕೃಷಿ ಮಾರಾಟ ಇಲಾಖೆಯ ನಿರ್ದೇಶಕರಾಗಿ ಮತ್ತು ರಮೇಶ್ ಪಿ ಕೋನಾರೆಡ್ಡಿ ಅವರನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅಂತೆಯೇ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ನಿರ್ದೇಶಕರಾಗಿದ್ದ ವಿಜಯ್ ಬಿ.ಪಿ ಅವರಿಗೆ ಸ್ಥಳ ನಿಯುಕ್ತಿಗಾಗಿ ಸಂಬಂಧ ಇಲಾಖೆಗೆ ಕಾರ್ಯವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ : ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!


















