ಹಾವೇರಿ : ಕೀಟನಾಶಕ ಸೇವಿಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹಾವೇರಿ ಜಿಲ್ಲೆಯ ಹಂದಿಗನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಹಂದಿಗನೂರು ಗ್ರಾಮ ಪಂಚಾಯತ್ ಪಿಡಿಓ ಉಮೇಶ್ ದ್ಯಾಮಣ್ಣನವರ್ (54) ಎಂದು ಗುರುತಿಸಲಾಗಿದೆ. ಅವರು ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಡಿಗೆ ಮನೆಯಲ್ಲೇ ವಿಷ ಸೇವಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಕುಟುಂಬಸ್ಥರು ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಉಮೇಶ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆ ಕುಟುಂಬಸ್ಥರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಯಲ್ಲಿ ಶೋಕದ ವಾತಾವರಣ ನಿರ್ಮಾಣ ಮಾಡಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಈ ಘಟನೆ ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಬ್ರಿಮ್ಸ್‌ನಲ್ಲಿ ಅಮಾನವೀಯ ಕೃತ್ಯ – ಸತ್ತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಮಾಡ್ತಿದ್ದ ಸಿಬ್ಬಂದಿ ವಿರುದ್ದ FIR!



















