ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (Sports Authority of India Recruitment 2026) ಖಾಲಿ ಇರುವ 100 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 100 ಸಹಾಯಕ ತರಬೇತುದಾರರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಕ್ರೀಡಾ ಪ್ರಾಧಿಕಾರ
ಒಟ್ಟು ಹುದ್ದೆಗಳು: 100
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 27
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.12 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ sportsauthorityofindia.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
O/o the Dy. Director (Human Resources Division-II), Sports Authority of India, Head Office, Gate No.10 (East Gate), Jawaharlal Nehru Stadium Lodhi Road, New Delhi-110003



















