ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಖು ಎಂದು ಬಯಸುತ್ತಿದ್ದೀರಾ? ಅದರಲ್ಲೂ ಬೆಂಗಳೂರಿನಲ್ಲೇ ಉದ್ಯೋಗ ಪಡೆಯಬೇಕು ಎಂಬ ಪ್ರಯತ್ನ ಇದೆಯೇ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕರ್ನಾಟಕದ ಬೆಂಗಳೂರಿನಲ್ಲೇ ಇರುವ ಕೇಂದ್ರ ಸರ್ಕಾರದ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಒಟ್ಟು ಹುದ್ದೆ: 01
ಅರ್ಜಿ ಸಲ್ಲಿಕೆ ಮಾದರಿ: ಇ-ಮೇಲ್
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಫ್ಯಾಕಲ್ಟಿ ಫೆಲೋ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 15
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಡಿ, ಎಂಎಸ್, ಡಿಎಂ, ಎಂಪಿಎಚ್, ಪಿಎಚ್.ಡಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ jncasr.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ dfaoff@jncasr.ac.in ಇ-ಮೇಲ್ ವಿಳಾಸಕ್ಕೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ



















