ದಾವಣಗೆರೆ : ಕಾಂಗ್ರೆಸ್ ಮುಖಂಡ ಜಮೀರ್ ಅಹಮದ್ ವಿರುದ್ಧ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದಕ್ಕೆ ಪೂರಕವಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾಕ್ರೋಚ್ ಪಾರ್ಟಿ ಹೆಸರಿನ ಎಕ್ಸ್‌ನಲ್ಲಿ ಆಡಿಯೋ ರಿಲೀಸ್ ಆಗಿದೆ. ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದೆ.
ಆಡಿಯೋದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ ಮಾತನಾಡಲಾಗಿದೆ. ಮುಸ್ಲಿಂ ವೋಟಿಂಗ್ ಕಡಿಮೆ ಇದೆ ಹೊರಗಡೆ ಬಂದ್ರೆ ಅವರನ್ನ ನಂಬೋಕಾಗಲ್ಲ ಕಾಂಗ್ರೆಸ್‌ಗೆ ವೋಟ್ ಹಾಕುತ್ತಾರೆ. ಒತ್ತಾಯ ಮಾಡಿ ಮನೆಯಿಂದ ಕರ್ಕೊಂಡು ಬರಬೇಡಿ. ಪಕ್ಷೇತರರಿಗೆ ಎಸ್‌ಡಿಪಿಐಗೆ ವೋಟ್ ಹಾಕಲಿ ಎಂದು ಜಮೀರ್ ಅಹಮ್ಮದ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಆಡಿಯೋ ಹರಿದಾಡುತ್ತಿದ್ದರೂ ಜಮೀರ್ ಕಡೆಯಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ. ಸಚಿವ ಸ್ಥಾನಕ್ಕೆ ಜಮೀರ್ ಲಾಬಿ ಮಾಡುವಾಗಲೇ ಈ ಆಡಿಯೋ ಹೊರಬಂದಿದ್ದು, ಕಾಂಗ್ರೆಸ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಆಡಿಯೋದಲ್ಲಿ ಏನಿದೆ?
ಜಮೀರ್ ಅಹ್ಮದ್ ಖಾನ್‌ರದ್ದು ಎನ್ನಲಾದ ಆಡಿಯೋದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಬದಲಾಗಿ ಮುಸ್ಲಿಮರೆಲ್ಲಾ ಪಕ್ಷೇತರರಿಗೆ ವೋಟ್ ಹಾಕಬೇಕು ಎಂದು ಆಗ್ರಹಿಸುವುದು ತಿಳಿದು ಬಂದಿದೆ. ಒಂದು ವೇಳೆ ಮುಸ್ಲಿಮರು ವೋಟ್ ಹಾಕಿಲ್ಲ ಅಂದ್ರೂ ಓಕೆ, ಅವನಿಗೆ ಕಾಂಗ್ರೆಸ್ ವೋಟ್‌ಗಳು ಮೈನಸ್ ಆಗಬೇಕು ಎಂದು ತಮ್ಮ ಬಂಟನಿಗೆ ಜಮೀರ್ ಸೂಚನೆ ನೀಡಿರುವುದು ಆಡಿಯೋದಲ್ಲಿದೆ.
ಅಷ್ಟೇ ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿಗೆ ಜಾಸ್ತಿ ಓಟ್ ಹಾಕಬೇಡಿ. ಬಂಡಾಯ ನಿಂತು ಕಣದಿಂದ ಹಿಂದೆ ಸರಿದಿದ್ದ ಸಾದಿಕ್ ಪೈಲ್ವಾನ್ ವಾರ್ಡ್ ನಲ್ಲಿ ಕಾಂಗ್ರೆಸ್ ಗೆ ಓಟ್ ಕಡಿಮೆ ಬರುವಂತೆ ನೋಡಿಕೊಳ್ಳಿ. ಜಾಸ್ತಿ ಹಾಕದೇ ಇರುವಂತೆ ನೋಡಿ. ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷೇತರರಿಗೆ ಮತ ಹಾಕಿಸಿ. ಬಲವಂತವಾಗಿ ಮನೆಯಿಂದ ಕರೆದು ಬಂದು ಓಟ್ ಹಾಕಿಸೇಡಿ ಎಂದು ಆಡಿಯೋದಲ್ಲಿದೆ.
ಇದನ್ನೂ ಓದಿ : ಇಂದಿನಿಂದ ಬದಲಾಗಿದೆ ಹಣಕಾಸು ಜಗತ್ತು : ಹೊಸ ನಿಯಮಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!



















