ದಾವಣಗೆರೆ : ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧವೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆಕ್ರೋಶ ಹೊರಹಾಕಿದ್ದಾರೆ.
ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಎಸ್ ಮಲ್ಲಿಕಾರ್ಜುನ್ ಅವರು, ‘ಜಮೀರ್ ಅಹ್ಮದ್ ಮಾತನಾಡಿದ್ದು ಆಡಿಯೋ ಮೂಲಕ ಹೊರ ಬಂದಿದೆ. ಹೈಕಮಾಂಡ್ ನಾಯಕರು ಎಲ್ಲವನ್ನೂ ನೋಡಿದ್ದಾರೆ. ಈ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ’ ಎಂದಿದ್ದಾರೆ.
ಬಿಜೆಪಿಗೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ. ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಬಾರದು. ಜನರ ಆಶೀರ್ವಾದದಿಂದ ನಮ್ಮ ಮಗ ಗೆದ್ದಿದ್ದಾನೆ. ಆಡಿಯೋ ವೈರಲ್ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆ. ನಾನು ಅವರನ್ನು ಉಚ್ಛಾಟನೆ ಮಾಡಿ ಎನ್ನುವಂತ ಕೆಳಮಟ್ಟದ ರಾಜಕೀಯ ಮಾಡಲ್ಲ. ಹೈಕಮಾಂಡ್ ನಾಯಕರು ಈ ಬಗ್ಗೆ ತಿರ್ಮಾನ ಮಾಡ್ತಾರೆ ಎಂದು ತಿಳಿಸಿದ್ದಾರೆ.
ಜಮೀರ್ ಆಪ್ತ ಸಿರಾಜ್ ದೂರು
ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ ಬೆನ್ನಲ್ಲೇ, ಪ್ರಕರಣ ಈಗ ಕಾನೂನು ಸಮರದ ರೂಪ ಪಡೆದುಕೊಂಡಿದೆ. ತಮ್ಮ ವಿರುದ್ಧ ಸುಳ್ಳು ಆಡಿಯೋ ಸೃಷ್ಟಿಸಿ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮೊಹಮ್ಮದ್ ಸಿರಾಜ್ ಅವರು ದಾವಣಗೆರೆಯ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
“ನಾನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (KMDC) ನಾಮನಿರ್ದೇಶಿತ ಸದಸ್ಯನಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ, ರಾಜಕೀಯ ದುರುದ್ದೇಶದಿಂದ ನಮ್ಮನ್ನು ಗುರಿಯಾಗಿಸಿಕೊಂಡು ಈ ನಕಲಿ ಆಡಿಯೋ ಸೃಷ್ಟಿಸಲಾಗಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ ; ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್ಗೆ ದೂರು!



















