ಬೆಂಗಳೂರು : ನೀವು ಧಾರವಾಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಫೀಲ್ಡ್ ಇನ್ವೆಸ್ಟಿಗೇಟರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಧಾರವಾಡ
ಹುದ್ದೆಗಳ ಹೆಸರು: ಫೀಲ್ಡ್ ಇನ್ವೆಸ್ಟಿಗೇಟರ್
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 21
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 35 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಶಾರ್ಟ್ ಲಿಸ್ಟಿಂಗ್, ಸ್ಕ್ರೀನಿಂಗ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 20 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iitdh.ac.in ಗೆ ಭೇಟಿ ನೀಡಬೇಕು
ಫೀಲ್ಡ್ ಇನ್ವೆಸ್ಟಿಗೇಟರ್ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಬಿಜೆಪಿ “ಹೈ” ಆಫರ್‌ಗಳಿಗೆ ನೋ ಎಂದ ಅಣ್ಣಾಮಲೈ : ಹೊಸ ಪಕ್ಷ ಸ್ಥಾಪನೆಗೆ ತಮಿಳುನಾಡು ಸಿಂಗಂ ಸಜ್ಜು!


















