ಬೆಂಗಳೂರು : ನೀವೇನಾದರೂ ರಾಜ್ಯ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (KSLSA Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2 ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಡ್ರೈವರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 25
ಉದ್ಯೋಗ ಸ್ಥಳ: ಬೆಂಗಳೂರು
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಹಾಗೆಯೇ, ಅಭ್ಯರ್ಥಿಗಳು ವಾಹನ ಚಾಲನಾ ಪರವಾನಗಿ (ಡಿಎಲ್) ಹೊಂದಿರಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವವರು ಮೊದಲಿಗೆ kslsa.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ karnataka.nalsa.gov.in ವೆಬ್ ಸೈಟ್ ಗೆ ಭೇಟಿ ನೀಡಿ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಸದಸ್ಯ ಕಾರ್ಯದರ್ಶಿ,
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ,
ನ್ಯಾಯದೇಗುಲ, ಪ್ರಥಮ ಮಹಡಿ,
ಎಚ್. ಸಿದ್ದಯ್ಯ ರಸ್ತೆ,
ಬೆಂಗಳೂರು-560027
ಇದನ್ನೂ ಓದಿ : ಮಹಿಳಾ ಟಿ20 ವಿಶ್ವಕಪ್ – ಭಾರತವೇ ಗೆಲ್ಲುವ ನೆಚ್ಚಿನ ತಂಡ ಎಂದ ಅಂಜುಮ್ ಚೋಪ್ರಾ



















