ಬೆಂಗಳೂರು : ಇನ್ನೇನು ಕೆಲವೇ ಗಂಟೆಗಳಲ್ಲಿ ಕಾರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ಆತ್ಮೀಯವಾಗಿ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ಯಶಸ್ವಿಯಾಗಿ ನಡೆಸಲು ಮತ್ತು ರಾಜ್ಯದ ಅಭಿವೃದ್ಧಿಗೆ ವಿರೋಧ ಪಕ್ಷದ ಕಡೆಯಿಂದ ಅಗತ್ಯ ಸಹಕಾರ ನೀಡಬೇಕೆಂದು ಯಡಿಯೂರಪ್ಪನವರಲ್ಲಿ ಡಿಕೆಶಿ ಕೋರಿದ್ದಾರೆ ಎಂಉ ತಿಳಿದುಬಂದಿದೆ.
ಇದನ್ನೂ ಓದಿ : ಡಿಕೆಶಿ ಪದಗ್ರಹಣ – ಲೋಕಭವನದಲ್ಲಿ ಬಿಗಿ ಬಂದೋಬಸ್ತ್.. 2000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ!


















