ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿ.ಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ‘ಕನಕಪುರ ಬಂಡೆ’ಗೆ ಶುಭ ಕೋರಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಮೋದಿ ತಿಳಿಸಿದ್ದಾರೆ.
ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದ ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು.
ಇದನ್ನೂ ಓದಿ : ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!


















