ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (Digital India Corporation Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 50 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 50 ಟೆಕ್ನಿಕಲ್ ಇಂಟರ್ನ್ ಶಿಪ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಡಿಜಿಟಲ್ ಇಂಡಿಯಾ ಕಾರ್ಪೊರೇಷನ್
ಹುದ್ದೆ ಹೆಸರು: ಟೆಕ್ನಿಕಲ್ ಇಂಟರ್ನ್ ಶಿಪ್
ಒಟ್ಟು ಹುದ್ದೆಗಳು: 50
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 15
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಇತ್ತೀಚೆಗಷ್ಟೇ ಪದವಿ ಹಾಗೂ ಸ್ನಾತಕೋತ್ತರ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ dic.gov.in ಗೆ ಭೇಟಿ ನೀಡಬೇಕು.
ಟೆಕ್ನಿಕಲ್ ಇಂಟರ್ನ್ ಶಿಪ್ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!



















