ತುಮಕೂರು : ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಗಡಿಭಾಗದ ಕೆಂಕೆರೆ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ. ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ತೆರಳುತ್ತಿದ್ದ ಇನೋವಾ ಕಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಇನೋವಾ ಕಾರು ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹುಳಿಯಾರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿರುವ ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು


















