ಬೀದರ್ : ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಗ್ರಾಮ ಆಡಳಿತಾಧಿಕಾರಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕಾಂಬಳೆವಾಡಿ ಗ್ರಾಮದ ಮಹಾದೇವ (28) ಎಂದು ಗುರುತಿಸಲಾಗಿದೆ.
ಕೇವಲ ಒಂದು ವರ್ಷದ ಹಿಂದೆಯಷ್ಟೇ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆಗೆ ಸೇರಿದ್ದ ಮಹಾದೇವ, ಬಸವಕಲ್ಯಾಣ ತಾಲೂಕಿನ ಹಳ್ಳಿ ಹಾಗೂ ಉಮಾಪುರ ಗ್ರಾಮಗಳಿಗೆ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಅಕಾಲಿಕ ನಿಧನ ಕುಟುಂಬಸ್ಥರು ಮತ್ತು ಗ್ರಾಮಸ್ಥರಲ್ಲಿ ಶೋಕದ ವಾತಾವರಣ ಮೂಡಿಸಿದೆ.
ಮಹಾದೇವ ಅವರು ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದ್ದು, ಈ ಆರೋಪಗಳ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆರೋಪಗಳು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಆತ್ಮಹತ್ಯೆಯ ಹಿಂದಿನ ನಿಜವಾದ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ


















