ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲೇ ಇರುವ ಕೇಂದ್ರ ಸರ್ಕಾರದ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದು ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಒಟ್ಟು ಹುದ್ದೆ: 01
ಅರ್ಜಿ ಸಲ್ಲಿಕೆ ಮಾದರಿ: ಇ-ಮೇಲ್
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಎಂಜಿನಿಯರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 11
ನೇಮಕಾತಿ ಹೊಂದಿದವರಿಗೆ 60 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಬಿ.ಇ ಅಥವಾ ಬಿ.ಟೆಕ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 65 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ jncasr.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ estab@jncasr.ac.in ಇ-ಮೇಲ್ ವಿಳಾಸಕ್ಕೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


















