ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಂಟರ್‌ಪ್ರೆನರ್‌ಶಿಪ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಲ್ಲಿ (EDII Recruitment 2026) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 3 ಪ್ರಾಜೆಕ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಎಂಟರ್ ಪ್ರೆನರ್ ಶಿಪ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ (EDII)
ಒಟ್ಟು ಹುದ್ದೆಗಳು: 3
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಇ-ಮೇಲ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 14
ಉದ್ಯೋಗ ಸ್ಥಳ: ಬೆಂಗಳೂರು
ಕರ್ನಾಟಕದ ಬೆಂಗಳೂರು, ಒಡಿಶಾದ ಭುವನೇಶ್ವರ ಹಾಗೂ ಮಹಾರಾಷ್ಟ್ರದ ಪುಣೆಯಲ್ಲಿ ತಲಾ ಒಂದು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 53 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ ediindia.org ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು hrsro@ediindia.org ಗೆ ಮೇಲ್ ಮಾಡಬೇಕು
ಇದನ್ನೂ ಓದಿ : ಭಾರತದಲ್ಲಿ ಇಂಧನ ಕ್ರಾಂತಿ : ಶೀಘ್ರವೇ ಲಭ್ಯವಾಗಲಿದೆ ಪರಿಸರ ಸ್ನೇಹಿ ‘E85’ ಇಂಧನ!



















