ಉಡುಪಿ : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಉಡುಪಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 17 ಹುದ್ದೆಗಳ ನೇಮಕಾತಿಗಾಗಿ (DHFWO Udupi Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಮೆಡಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ, ಉಡುಪಿ
ಹುದ್ದೆಗಳ ಹೆಸರು: ಮೆಡಿಕಲ್ ಆಫೀಸರ್
ಒಟ್ಟು ಹುದ್ದೆಗಳು: 17
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 11
13 ಮೆಡಿಕಲ್ ಆಫೀಸರ್ ಹಾಗೂ 4 ಪ್ರೈಮರಿ ಹೆಲ್ತ್ ಕೇರ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಉಡುಪಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್ ಹಾಗೂ ಎಎನ್ಎಂ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ udupi.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
District Project Management Unit, NHM District Health and Family Welfare Officers’ Office, Udupi- 576101.
ಇದನ್ನೂ ಓದಿ : ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಸಾರ್ವತ್ರಿಕ ವರ್ಗಾವಣೆಯ ಗಡುವು ಜೂನ್ 30ರವರೆಗೆ ವಿಸ್ತರಣೆ!



















