ಬೆಂಗಳೂರು : ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಹೈಡ್ರಾಮಾಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳಗಳ ಬಳಿಕ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದು, ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದಿದ್ದಾರೆ. ಸಚಿವ ಸಂಪುಟದಲ್ಲಿ ಮುಂದುವರಿದು ಕೆಲಸ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಮಲಿಂಗಾ ರೆಡ್ಡಿ ಪತಿಕ್ರಿಯೆಗೆ ನಕಾರ
ಸುದ್ದಿಗೋಷ್ಠಿಗೂ ಮೊದಲು ರಣದೀಪ್ ಸುರ್ಜೆವಾಲ ಜೊತೆ ಮಹತ್ವದ ಚರ್ಚೆ ನಡೆಸಿ ಹೊರಬಂದ ರಾಮಲಿಂಗಾ ರೆಡ್ಡಿ ಮಾಧ್ಯಮ ಜೊತೆ ಯಾವುದೇ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ. ಸಭೆ ಬಳಿಕ ಗರಂ ಆಗಿ ಹೊರಬಂದ ರಾಮಲಿಂಗಾ ರೆಡ್ಡಿ ನನ್ನನ್ನು ಫಾಲೋ ಮಾಡಬೇಡಿ. ಸದ್ಯ ನಾನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 8 ಗಂಟೆವರೆಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.
ಇದನ್ನೂ ಓದಿ : ಪತ್ನಿ-ಮಗನ ಸಮಾಧಿಯನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಪತಿ – 3 ಮಕ್ಕಳು ಅನಾಥ


















