ಬೆಂಗಳೂರು : ರಾಜ್ಯ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿಗಳ ಮಟ್ಟದಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದ್ದು, ಮೂವರು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರನ್ನು ಸಿಐಡಿ (ಅಪರಾಧ ತನಿಖಾ ಇಲಾಖೆ) ಡಿಜಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ಅವರು ಕಮಾಂಡ್ ಸೆಂಟರ್‌ನ ಪ್ರಭಾರ ಡಿಜಿಯಾಗಿಯೂ ತಮ್ಮ ಜವಾಬ್ದಾರಿಯನ್ನು ಮುಂದುವರಿಸಲಿದ್ದಾರೆ.
ಇನ್ನೊಂದೆಡೆ, ಹಿರಿಯ ಐಪಿಎಸ್ ಅಧಿಕಾರಿ ಚಂದ್ರಗುಪ್ತ ಅವರನ್ನು ರಾಜ್ಯ ಇಂಟಲಿಜೆನ್ಸ್ ವಿಭಾಗದ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ರಾಜ್ಯದ ಆಂತರಿಕ ಭದ್ರತೆ ಮತ್ತು ಗುಪ್ತಚರ ಮಾಹಿತಿಗಳ ಮೇಲ್ವಿಚಾರಣೆಯ ಪ್ರಮುಖ ಜವಾಬ್ದಾರಿ ಇದೀಗ ಅವರ ಹೆಗಲಿಗೆ ಬಂದಿದೆ.
ಈ ಹಿಂದೆ ರಾಜ್ಯ ಗುಪ್ತ ವಾರ್ತೆ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದ ಐಜಿಪಿ ಲಾಬೂರಾಮ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸದ್ಯಕ್ಕೆ ಅವರಿಗೆ ಯಾವುದೇ ಹೊಸ ಹುದ್ದೆ ಅಥವಾ ಸ್ಥಳ ನಿಯುಕ್ತಿ ನೀಡದೇ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ : “ನಮ್ಮ ಹಣ ವಾಪಸ್ ಕೊಡಿ” – TMC ನಾಯಕ ಮದನ್ ಮಿತ್ರಾ ಕಾರಿನ ಮೇಲೆ ಮೊಟ್ಟೆ ಎಸೆದು ಸಾರ್ವಜನಿಕರ ಆಕ್ರೋಶ!


















