ಕೋಲಾರ : ಜಿಲ್ಲೆಯಲ್ಲಿ ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ರಾಜ್ಯ ರಾಜಕೀಯದ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಇನ್ನೊಂದು ವರ್ಷದೊಳಗೆ ರಾಜ್ಯ ಸರ್ಕಾರ ಬಿದ್ದೋಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು, ದೆಹಲಿಯಿಂದ ತಮಗೆ ಬಂದಿರುವ ಮಾಹಿತಿಯ ಪ್ರಕಾರ ಸರ್ಕಾರ ಇನ್ನೂ ಒಂದು ವರ್ಷ ಮಾತ್ರ ಉಳಿಯಬಹುದು, ಸರ್ಕಾರದಲ್ಲಿ ಒಂದರ ಹಿಂದೆ ಒಂದರಂತೆ ವಿಕೆಟ್‌ಗಳು ಬೀಳುತ್ತಿದ್ದು, ರಾಜಕೀಯ ಅಸ್ಥಿರತೆ ಹೆಚ್ಚಾಗುತ್ತಿದೆ. ಮೂರು ವರ್ಷಕ್ಕೆ ಮತ್ತೆ ಚುನಾವಣೆ ಬರಬಹುದೇನೋ ಎಂಬ ಭಯ ಕಾಡುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬಂದಿರುವ ಹಿನ್ನೆಲೆಯಲ್ಲಿ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ದೊರೆಯುವ ನಿರೀಕ್ಷೆ ಇದೆ. ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿರುವುದರಿಂದ ಜೆಡಿಎಸ್ ಪಕ್ಷಕ್ಕೆ ಯಾವುದೇ ಹಿನ್ನಡೆ ಆಗುವುದಿಲ್ಲ. ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿಯೂ ರಾಜಕೀಯವಾಗಿ ಯಾವುದೇ ದೊಡ್ಡ ಬದಲಾವಣೆ ಆಗಿರಲಿಲ್ಲ ಎಂದು ಉದಾಹರಣೆ ನೀಡಿದ್ದಾರೆ.
ಇದನ್ನೂ ಓದಿ : ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?


















