ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಒಎಸ್ ಡಿ (ಡಾಕ್ಟರ್) ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು (Ministry of External Affairs Recruitment 2026) ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ ಇಂತಿದೆ :
ನೇಮಕಾತಿ ಸಂಸ್ಥೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯ
ಹುದ್ದೆಗಳ ಹೆಸರು: ಒಎಸ್ ಡಿ (ಡಾಕ್ಟರ್)
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 30
ಉದ್ಯೋಗ ಸ್ಥಳ: ನವದೆಹಲಿ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ವೈದ್ಯಕೀಯ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವೃತ್ತಿಯಲ್ಲಿ ಅನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು mea.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಇಲ್ಲವೇ, ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಯನ್ನು aopa3@mea.gov.in ಗೆ ಮೇಲ್ ಮಾಡಿದರೂ ಸಾಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಆಡಳಿತಾಧಿಕಾರಿ (ಪಿ.ಎ-III), ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕೊಠಡಿ ಸಂಖ್ಯೆ 4093, ಜವಾಹರ ಲಾಲ್ ನೆಹರು ಭವನ, ನವದೆಹಲಿ – 110011.
ಇದನ್ನೂ ಓದಿ : ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್ ವಿಡಿಯೋ ವೈರಲ್!



















