ಬೆಂಗಳೂರು : ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಸಲುವಾಗಿ ನಗರ ಮೊಬಿಲಿಟಿ ಯೋಜನೆ, ವಿನ್ಯಾಸ ಮತ್ತು ಕ್ರಿಯಾ ಸಂಶೋಧನಾ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ 3 ಹುದ್ದೆಗಳ ನೇಮಕಾತಿಗಾಗಿ (DUDC Kalaburagi Recruitment 2026) ಅಧಿಸೂಚನೆ ಹೊರಡಿಸಿದೆ. ಸಹಾಯಕ ಸಾರಿಗೆ ಯೋಜಕ ಸೇರಿ 3 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ನಗರ ಭೂ ಸಾರಿಗೆ ನಿರ್ದೇಶನಾಲಯ
ಹುದ್ದೆಗಳ ಹೆಸರು: ಸಹಾಯಕ ಸಾರಿಗೆ ಯೋಜಕ ಇತ್ಯಾದಿ
ಒಟ್ಟು ಹುದ್ದೆಗಳು: 3
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 15
ಉದ್ಯೋಗ ಸ್ಥಳ: ಕಲಬುರಗಿ
ಎರಡು ಸಹಾಯಕ ಸಾರಿಗೆ ಆಯೋಜಕ ಹಾಗೂ ಒಂದು ಕ್ಯಾಡ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆರಂಭಿಕ ಒಪ್ಪಂದದ ಅವಧಿ ಒಂದು ವರ್ಷವಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುವ ಉದ್ಯೋಗಿಗಳಿಗೆ ಯೋಜನೆಯ ಅವಶ್ಯಕತೆಗಳಿಗೆ ಅನುಗುಣವಾಗಿ ಸೇವಾ ಅವಧಿಯನ್ನು ವಿಸ್ತರಿಸುವ ಸಾಧ್ಯತೆ ಇರುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 84,592 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು https://dult.karnataka.gov.in/en ವೆಬ್ ಸೈಟ್ ಗೆ ಭೇಟಿ ನೀಡಬೇಕು. ಕರಿಯರ್ಸ್ ವಿಭಾಗದಲ್ಲಿ ನಿಮಗೆ ಬೇಕಾದ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















