ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಸಂಸ್ಥೆಯಲ್ಲಿ ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IIAP Recruitment 2026) ಹೊರಡಿಸಲಾಗಿದೆ. 5 ಅಪ್ಪರ್ ಡಿವಿಷನ್ ಕ್ಲರ್ಕ್ ಗಳ ನೇಮಕಾತಿ ನಡೆಯುತ್ತಿದೆ. ಇದರೊಂದಿಗೆ ಬೆಂಗಳೂರಿನಲ್ಲಿಯೇ ಉತ್ತಮ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಂತಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್
ಹುದ್ದೆ ಹೆಸರು: ಅಪ್ಪರ್ ಡಿವಿಷನ್ ಕ್ಲರ್ಕ್
ಒಟ್ಟು ಹುದ್ದೆಗಳು: 05
ಅರ್ಜಿ ಸಲ್ಲಿಕೆಯ ವಿಧಾನ: ಆನ್ ಲೈನ್ ಅಥವಾ ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 29
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 81 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು iiap.res.in ಗೆ ಭೇಟಿ ನೀಡಬಹುದು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ಕೌಶಲ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವಿಳಾಸ
ಆಡಳಿತಾಧಿಕಾರಿಗಳು,
ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್,
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ,
ಸರ್ಜಾಪುರ ರಸ್ತೆ, 2ನೇ ಬ್ಲಾಕ್, ಕೋರಮಂಗಲ,
ಬೆಂಗಳೂರು – 560 034
ಇದನ್ನೂ ಓದಿ : ‘ನಮ್ಮ ನಿರ್ಧಾರ ಕಳಪೆಯಾಗಿದ್ದವು’- DRS ಎಡವಟ್ಟಿನ ಬಗ್ಗೆ ಅಫ್ಘಾನ್ ಕೋಚ್ ಬೇಸರ



















