ಬೆಂಗಳೂರು : ನಗರದ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೈಕ್‌ನಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಯಶವಂತಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆ ಮಾಡುವ ಕೆಲಸ ನಡೆಯುತ್ತಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಘಟನೆಯಿಂದ ಕೆಲಕಾಲ ಆ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಪೊಲೀಸರು ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ.
ಇದನ್ನೂ ಓದಿ : ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!



















