ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪರಮಾಪ್ತ ಜಮೀರ್ ಅಹ್ಮದ್ ಖಾನ್ ವಿರುದ್ಧೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೌದು.. ಜಮೀರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಸಿದ್ದರಾಮಯ್ಯವರನ್ನು ಭೇಟಿ ಮಾಡಿ ಒತ್ತಾಯಿಸಿದ್ದು, ಈ ವೇಳೆ ಗಂರ ಆದ ಸಿದ್ದರಾಮಯ್ಯ, ಅವನು (ಜಮೀರ್ ಅಹ್ಮದ್ ಖಾನ್) ನನ್ನ ಆಪ್ತ ಎಂದು ನೀವೆಲ್ಲಾ ಹೇಳುತ್ತೀರಾ. ಆದ್ರೆ, ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ ಎಂದು ಸಿಡಿಮಿಡಿಗೊಂಡಿದ್ದಾರೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಮೊದಲೇ ಆಡಿಯೋವೊಂದು ವೈರಲ್ ಆಗಿರುವುದು ಜಮೀರ್ ಅಹ್ಮದ್ ಮೇಲೆ ಪಕ್ಷ ವಿರೋಧಿ ಆರೋಪ ಕೇಳಿಬಂದಿದ್ದು, ಇದರ ನಡುವೆ ಇದೀಗ ಸಿದ್ದರಾಮಯ್ಯ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ


















