ಬೆಂಗಳೂರು : ನೀವು ಯಾವುದಾದರೂ ಪದವಿ ಕೋರ್ಸ್ ಮುಗಿಸಿದ್ದೀರಾ? ಬೆಂಗಳೂರಿನಲ್ಲೇ ಒಳ್ಳೆಯ ಸಂಬಳದ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ದೊರೆತಿದೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 3
ಹುದ್ದೆಗಳ ಹೆಸರು: ಅಕೌಂಟಂಟ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 7
ಅಕೌಂಟಂಟ್, ನ್ಯೂರೋಅನಸ್ತೇಶಿಯಾ ಟೆಕ್ನಾಲಜಿಸ್ಟ್, ಜೂನಿಯರ್ ಸೆಕ್ರೆಟರಿಯಲ್ ಅಸಿಸ್ಟಂಟ್ ತಲಾ ಒಂದೊಂದು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 35,400 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು recruitment@nimhans.net ವಿಳಾಸಕ್ಕೆ ಮೇಲ್ ಮಾಡಬೇಕು ಎಂದು ತಿಳಿಸಲಾಗಿದೆ. ಹಾಗೆಯೇ, ಅರ್ಜಿ ಹಾಗೂ ದಾಖಲೆಗಳ ಹಾರ್ಡ್ ಕಾಪಿಗಳನ್ನು The The Director, NIMHANS, Post box No.2900, Hosur Road, Bengaluru -560029 ವಿಳಾಸಕ್ಕೆ ಪೋಸ್ಟ್ ಕೂಡ ಮಾಡಬಹುದು.
ಇದನ್ನೂ ಓದಿ : ಭಾರತ-ಅಫ್ಘಾನ್ ಮೊದಲ ಏಕದಿನ ಪಂದ್ಯ : ಫಾರ್ಮ್‌ಗೆ ಮರಳುವ ತವಕದಲ್ಲಿ ರೋಹಿತ್ ಶರ್ಮಾ!



















