ಬೆಂಗಳೂರು : ನೀವೇನಾದರೂ ಮೈಸೂರು ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 12 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ನೇಮಕಾತಿ ಸಂಸ್ಥೆ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI)
ಒಟ್ಟು ಹುದ್ದೆಗಳು: 12
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಜೂನ್ 17
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಅಥವಾ ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cftri.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಸಂದರ್ಶನ ನಡೆಯುವ ಸ್ಥಳ
CSIR – Central Food Technological Research Institute, Mysuru-570 020.
ಇದನ್ನೂ ಓದಿ : ಸುಜುಕಿ ಗ್ರಾಹಕರಿಗೆ ಭರ್ಜರಿ ಆಫರ್ : ಜೂನ್‌ನಲ್ಲಿ ಇನ್ವಿಕ್ಟೊ, ಗ್ರ್ಯಾಂಡ್ ವಿಟಾರಾ ಮೇಲೆ ರಿಯಾಯಿತಿ!



















