ಕೇರಳ : ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಯ್ಯಪ್ಪ ಮಾಲೆ ಧರಿಸಿ, ಇರುಮುಡಿ ಹೊತ್ತು ಶಬರಿಮಲೆ ಯಾತ್ರೆಯನ್ನು ಆರಂಭಿಸಿದ್ದಾರೆ.

ಇಂದು ಬೆಳಿಗ್ಗೆ ಕೊಚ್ಚಿಯ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾಲೆ ಧರಿಸಿದ ಅವರು, ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಸುಮಾರು 30 ಭಕ್ತರ ತಂಡದೊಂದಿಗೆ ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ.

ಭಕ್ತಿಭಾವದಿಂದ ಪೂಜೆ ಸಲ್ಲಿಸಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಹೆಚ್‌ಡಿಕೆ ಯಾತ್ರೆಗೆ ಚಾಲನೆ ನೀಡಿದ್ದಾರೆ. ಯಾತ್ರೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ಹಾಗೂ ಎಸ್.ಆರ್. ಮಹೇಶ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

ಅಲ್ಲದೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಶಾಸಕ ಶರಣಗೌಡ ಕಂದಕೂರ್ ಹಾಗೂ ಇತರ ಪ್ರಮುಖ ಮುಖಂಡರು ಸಹ ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದ್ದಾರೆ.
ಇದನ್ನೂ ಓದಿ : ಸಾಗರದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು!


















