ಮೈಸೂರು : ಜಿಲ್ಲೆಯ ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಪಬ್‌ನಲ್ಲಿ (ಬಾರ್ ಅಂಡ್ ರೆಸ್ಟೋರೆಂಟ್) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಬ್‌ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವ ಏಳು ಜನರನ್ನು ಚಿಕಿತ್ಸೆಗಾಗಿ ಸುಯೋಗ ಹಾಗೂ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಇದನ್ನೂ ಓದಿ ; ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ


















