ಬೆಂಗಳೂರು : ಬೆಂಗಳೂರಿನಲ್ಲೇ ಇರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಯು.ಆರ್. ರಾವ್ ಸ್ಯಾಟಲೈಟ್ ಸೆಂಟರ್ ನಲ್ಲಿ ಖಾಲಿ ಇರುವ 17 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು (ISRO URSC Recruitment 2026) ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಸ್ರೋ ಯು.ಆರ್. ರಾವ್ ಸ್ಯಾಟಲೈಟ್ ಸೆಂಟರ್
ಒಟ್ಟು ಹುದ್ದೆಗಳು: 17
ಹುದ್ದೆಗಳ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 11
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂ.ಇ, ಎಂ.ಟೆಕ್ ಹಾಗೂ ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ isro.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : ಭಾರತದ ಭದ್ರತೆಗೆ ಹೊಸ ಆತಂಕ : ಅತ್ಯಾಧುನಿಕ ಶಸ್ತ್ರಾಸ್ತ್ರ ಸಜ್ಜಿತ ‘ಖಲಿಸ್ತಾನಿ ಲಿಬರೇಷನ್ ಆರ್ಮಿ’ ಉದಯ!



















