ಬೆಂಗಳೂರು : ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL Recruitment 2025 Recruitment 2026) ದಲ್ಲಿ ಖಾಲಿ ಇರುವ 194 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 194 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL)
ಒಟ್ಟು ಹುದ್ದೆಗಳು : 194
ಹುದ್ದೆ ಹೆಸರು: ಅಸಿಸ್ಟಂಟ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 14
ಅಸಿಸ್ಟಂಟ್ ಮ್ಯಾನೇಜರ್, ಮಾರ್ಕೆಟಿಂಗ್ ಆಫೀಸರ್, ಟೆಕ್ನಿಕಲ್ ಆಫೀಸರ್, ಜೂನಿಯರ್ ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಬಿ.ಇ., ಬಿ.ಟೆಕ್, ಎಂಎಸ್ಸಿ, ಎಂಬಿಎ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ, ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.55 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು shimul.coop ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ41 ಹುದ್ದೆಗಳ ನೇಮಕಾತಿ: 96 ಸಾವಿರ ರೂ. ಸಂಬಳ



















