ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ದಾರುಣ ಘಟನೆ ನಡೆದಿದ್ದು, ನಾಲ್ಕು ವರ್ಷದ ಬಾಲಕನೊಬ್ಬ ಎದೆ ಉರಿ ಕಾಣಿಸಿಕೊಂಡು ಸಾವನ್ನಪ್ಪಿದ್ದಾನೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ಅವರ ಪುಜತ್ರನಾಗಿದ್ದ ವೈಷ್ಣವ್, ತನಗೆ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ.
ಕೂಡಲೇ ಪೋಷಕರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : “50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!



















