ಬೆಂಗಳೂರು : ಕೇಂದ್ರ ಸರ್ಕಾರವು ದೇಶದ ಸಣ್ಣ ರೈತರಿಗೆ ಅನುಕೂಲವಾಗಲಿ, ಅವರಿಗೆ ಹಣಕಾಸು ನೆರವು ಸಿಗಲಿ ಎಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ (ಪಿಎಂ ಕಿಸಾನ್- PM Kisan Scheme) ಯೋಜನೆ ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ವರ್ಷದಲ್ಲಿ 3 ಕಂತುಗಳಂತೆ ತಲಾ 2 ಸಾವಿರ ರೂಪಾಯಿಯನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ಅದರಂತೆ, ಜೂನ್ 20ರಂದು ಕೇಂದ್ರ ಸರ್ಕಾರವು 23ನೇ ಕಂತಿನ 2 ಸಾವಿರ ರೂಪಾಯಿಯನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ.
ಕೇಂದ್ರ ಸರ್ಕಾರವೇ 23ನೇ ಕಂತಿನ ಹಣವನ್ನು ಜಮೆ ಮಾಡುವ ಕುರಿತು ಎಕ್ಸ್ ಜಾಲತಾಣದಲ್ಲಿ ತಿಳಿಸಿದೆ. “ದೇಶದ ಅನ್ನದಾತರ ಖಾತೆಗಳಿಗೆ ಜೂನ್ 20ರಂದು ಕಿಸಾನ್ ಸಮ್ಮಾನ್ ನಿಧಿಯ 2 ಸಾವಿರ ರೂಪಾಯಿಯನ್ನು ಜಮೆ ಮಾಡಲಾಗುತ್ತದೆ” ಎಂದು ಮಾಹಿತಿ ನೀಡಲಾಗಿದೆ. ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ದೇಶದ ಸುಮಾರು 9 ಕೋಟಿಗೂ ಅಧಿಕ ರೈತರ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ವರ್ಗಾವಣೆ ಮಾಡಲಾಗುತ್ತದೆ.
ಆದರೆ, ಪಿಎಂ ಕಿಸಾನ್ ಯೋಜನೆಯ ಹಣವನ್ನು ಪಡೆಯಲು ರೈತರು ಬ್ಯಾಂಕ್ ಖಾತೆಗಳಿಗೆ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯವಾಗಿದೆ. ಹಾಗಾಗಿ ರೈತರು, https://pmkisan.gov.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಇ-ಕೆವೈಸಿ ಮಾಡಬಹುದಾಗಿದೆ. ಇಲ್ಲದಿದ್ದರೆ, ಸಾಮಾನ್ಯ ಸೇವಾ ಕೇಂದ್ರ (ಸಿ ಎಸ್ ಸಿ)ಗಳಿಗೆ ಭೇಟಿ ನೀಡಿ ಕೂಡ ಇ-ಕೆವೈಸಿ ಮಾಡಿಸಬಹುದಾಗಿದೆ. ಯೋಜನೆಯ ಹಣ ದುರುಪಯೋಗವಾಗಬಾರದು ಎಂಬ ಕಾರಣದಿಂದ, ಅರ್ಹರಿಗೆ ಯೋಜನೆಯ ಹಣ ತಲುಪಬೇಕು ಎಂದು ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಹೀಗೆ ಚೆಕ್ ಮಾಡಿ
• ಮೊದಲು ಅಧಿಕೃತ ವೆಬ್ ಸೈಟ್ ಆಗಿರುವ pmkisan.gov.in ಗೆ ಭೇಟಿ ನೀಡಿ.
• ‘Farmers Corner’ ವಿಭಾಗದಲ್ಲಿರುವ ‘Beneficiary List’ ಮೇಲೆ ಕ್ಲಿಕ್ ಮಾಡಿ.
• ನಿಮ್ಮ ರಾಜ್ಯ, ಜಿಲ್ಲೆ, ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
• ‘Get Report’ ಮೇಲೆ ಕ್ಲಿಕ್ ಮಾಡಿ. ಆಗ ನಿಮ್ಮ ಗ್ರಾಮದ ಫಲಾನುಭವಿಗಳ ಪಟ್ಟಿ ಲಭಿಸುತ್ತದೆ.
ಇದನ್ನೂ ಓದಿ : ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್!



















